7ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.
8ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
9ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
10ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
11ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.