Text copied!
Bibles in Kannada

ಜ್ಞಾನೋ 31:12-21 in Kannada

Help us?

ಜ್ಞಾನೋ 31:12-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, ಹಿತವನ್ನೇ ಮಾಡುತ್ತಿರುವಳು.
13 ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.
14 ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.
15 ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
16 ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
17 ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.
18 ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
19 ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು.
20 ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.
21 ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
ಜ್ಞಾನೋ 31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019