Text copied!
Bibles in Kannada

ಜ್ಞಾನೋ 31:13-26 in Kannada

Help us?

ಜ್ಞಾನೋ 31:13-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.
14 ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.
15 ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
16 ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
17 ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.
18 ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
19 ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು.
20 ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.
21 ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
22 ತನಗಾಗಿ ರತ್ನಗಂಬಳಿಗಳನ್ನು ಮಾಡುವಳು, ಆಕೆಯ ಉಡುಪು ನಾರುಮಡಿ, ರಕ್ತಾಂಬರ.
23 ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು.
24 ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.
25 ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು, ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.
26 ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು.
ಜ್ಞಾನೋ 31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019