Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 31

ಜ್ಞಾನೋ 31:4-11

Help us?
Click on verse(s) to share them!
4ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
5ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.
6ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.
7ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.
8ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.
9ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.
10ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
11ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.

Read ಜ್ಞಾನೋ 31ಜ್ಞಾನೋ 31
Compare ಜ್ಞಾನೋ 31:4-11ಜ್ಞಾನೋ 31:4-11