Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 3

ಜ್ಞಾನೋ 3:11-18

Help us?
Click on verse(s) to share them!
11ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
12ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
13ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
14ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.
15ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
16ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.
17ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.
18ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.

Read ಜ್ಞಾನೋ 3ಜ್ಞಾನೋ 3
Compare ಜ್ಞಾನೋ 3:11-18ಜ್ಞಾನೋ 3:11-18