16ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.
17ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.
18ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.
19ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.
20ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.
21ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
22ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
23ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
24ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.