Text copied!
Bibles in Kannada

ಜ್ಞಾನೋ 3:21-35 in Kannada

Help us?

ಜ್ಞಾನೋ 3:21-35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
22 ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
23 ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
24 ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
25 ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.
26 ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
27 ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
28 ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.
29 ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?
30 ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.
31 ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
32 ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.
33 ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.
34 ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
35 ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.
ಜ್ಞಾನೋ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019