28ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.
29ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?
30ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.
31ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
32ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.
33ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.
34ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
35ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.