3ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
4ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.
5ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
6ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
7ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.