10ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.
11ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.
12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ.
13ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
14ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.
15ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.