17ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.
18ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
19ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.
20ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.
21ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
22ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು.
23ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
24ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.
25ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.
26ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.