3ನಾನೂ ನನ್ನ ತಂದೆಗೆ ಅಧೀನನಾದ ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.
4ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
5ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
6ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.
7ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.
8ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
9ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”