Text copied!
Bibles in Kannada

ಜ್ಞಾನೋ 4:8-14 in Kannada

Help us?

ಜ್ಞಾನೋ 4:8-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
9 ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”
10 ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.
11 ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.
12 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ.
13 ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
14 ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.
ಜ್ಞಾನೋ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019