Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 4

ಜ್ಞಾನೋ 4:8-27

Help us?
Click on verse(s) to share them!
8ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.
9ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”
10ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.
11ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.
12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ.
13ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.
14ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.
15ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
16ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.
17ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.
18ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
19ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.
20ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.
21ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
22ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು.
23ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
24ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.
25ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.
26ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.
27ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.

Read ಜ್ಞಾನೋ 4ಜ್ಞಾನೋ 4
Compare ಜ್ಞಾನೋ 4:8-27ಜ್ಞಾನೋ 4:8-27