11ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
12“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
13ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
14ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.
15ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
16ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?
17ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.