Text copied!
Bibles in Kannada

ಜ್ಞಾನೋ 5:11-21 in Kannada

Help us?

ಜ್ಞಾನೋ 5:11-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
12 “ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
13 ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
14 ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.
15 ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
16 ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?
17 ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.
18 ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.
19 ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
20 ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.
ಜ್ಞಾನೋ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019