16ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?
17ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.
18ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.
19ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
20ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
21ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.
22ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.