Text copied!
Bibles in Kannada

ಜ್ಞಾನೋ 6:15-22 in Kannada

Help us?

ಜ್ಞಾನೋ 6:15-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.
16 ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.
17 ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,
18 ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,
19 ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
20 ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.
21 ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.
22 ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
ಜ್ಞಾನೋ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019