Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 6

ಜ್ಞಾನೋ 6:16-21

Help us?
Click on verse(s) to share them!
16ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.
17ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,
18ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,
19ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
20ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.
21ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.

Read ಜ್ಞಾನೋ 6ಜ್ಞಾನೋ 6
Compare ಜ್ಞಾನೋ 6:16-21ಜ್ಞಾನೋ 6:16-21