Text copied!
Bibles in Kannada

ಜ್ಞಾನೋ 6:27-33 in Kannada

Help us?

ಜ್ಞಾನೋ 6:27-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೋ?
28 ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ?
29 ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.
30 ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.
31 ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು.
32 ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
33 ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.
ಜ್ಞಾನೋ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019