Text copied!
Bibles in Kannada

ಜ್ಞಾನೋ 7:15-24 in Kannada

Help us?

ಜ್ಞಾನೋ 7:15-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.
16 ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ, ಐಗುಪ್ತದೇಶದ ನೂಲಿನ ವಿಚಿತ್ರ ವಸ್ತ್ರಗಳನ್ನೂ ಹಾಸಿದ್ದೇನೆ.
17 ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.
18 ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ.
19 ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ.
20 ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.
21 ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.
22 ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,
23 ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
24 ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.
ಜ್ಞಾನೋ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019