Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 7

ಜ್ಞಾನೋ 7:18-27

Help us?
Click on verse(s) to share them!
18ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ.
19ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ.
20ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.
21ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.
22ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,
23ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
24ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.
25ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ.
26ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, ಹತರಾದವರೋ ಲೆಕ್ಕವೇ ಇಲ್ಲ.
27ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ.

Read ಜ್ಞಾನೋ 7ಜ್ಞಾನೋ 7
Compare ಜ್ಞಾನೋ 7:18-27ಜ್ಞಾನೋ 7:18-27