10 ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.
11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
12 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.
13 ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
14 ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.
15 ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.
16 ನನ್ನ ಮೂಲಕ ಪ್ರಭುಗಳು, ನಾಯಕರು ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು.
17 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
18 ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.