Text copied!
Bibles in Kannada

ಜ್ಞಾನೋ 8:3-10 in Kannada

Help us?

ಜ್ಞಾನೋ 8:3-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ,
4 “ಜನರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ಧ್ವನಿಗೈಯುತ್ತೇನೆ.
5 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.
6 ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,
7 ನನ್ನ ಬಾಯಿ ಸತ್ಯವನ್ನೇ ಆಡುವುದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ.
8 ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ.
9 ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.
10 ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.
ಜ್ಞಾನೋ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019