Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 9

ಜ್ಞಾನೋ 9:1-9

Help us?
Click on verse(s) to share them!
1ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.
2ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ.
3ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
4ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,
5ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.
6ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
7ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
8ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.
9ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.

Read ಜ್ಞಾನೋ 9ಜ್ಞಾನೋ 9
Compare ಜ್ಞಾನೋ 9:1-9ಜ್ಞಾನೋ 9:1-9