5ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.
6ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
7ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
8ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.
9ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.