Text copied!
Bibles in Kannada

ದಾನಿ 6:6-10 in Kannada

Help us?

ದಾನಿ 6:6-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!
7 ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.
8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.
9 ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.
10 ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
ದಾನಿ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019