Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಧರ್ಮೋ - ಧರ್ಮೋ 21

ಧರ್ಮೋ 21:10-17

Help us?
Click on verse(s) to share them!
10ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು.
11ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ,
12ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.
13ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
14ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.
15ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,
16ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.
17ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.

Read ಧರ್ಮೋ 21ಧರ್ಮೋ 21
Compare ಧರ್ಮೋ 21:10-17ಧರ್ಮೋ 21:10-17