Text copied!
Bibles in Kannada

ನ್ಯಾಯ 13:5-10 in Kannada

Help us?

ನ್ಯಾಯ 13:5-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.
6 ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.
7 ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು.
8 ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.
9 ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವದೂತನು ಪುನಃ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ.
10 ಆದ್ದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ, “ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರುಗಿ ಬಂದಿದ್ದಾನೆ” ಎಂದು ತಿಳಿಸಲು
ನ್ಯಾಯ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019