Text copied!
Bibles in Kannada

ನ್ಯಾಯ 18:20-26 in Kannada

Help us?

ನ್ಯಾಯ 18:20-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.
21 ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.
22 ಅವರು ಮೀಕನ ಮನೆಯಿಂದ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ
23 ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು
24 ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.
25 ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.
26 ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.
ನ್ಯಾಯ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019