Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 19

ನ್ಯಾಯ 19:15-22

Help us?
Click on verse(s) to share them!
15ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು.
16ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.
17ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು
18ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.
19ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.
20ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;
21ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.
22ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.

Read ನ್ಯಾಯ 19ನ್ಯಾಯ 19
Compare ನ್ಯಾಯ 19:15-22ನ್ಯಾಯ 19:15-22