Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 1

ನ್ಯಾಯ 1:10-17

Help us?
Click on verse(s) to share them!
10ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.
11ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.
12ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.
13ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
14ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
15ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.
16ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
17ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.

Read ನ್ಯಾಯ 1ನ್ಯಾಯ 1
Compare ನ್ಯಾಯ 1:10-17ನ್ಯಾಯ 1:10-17