Text copied!
Bibles in Kannada

ನ್ಯಾಯ 1:11-18 in Kannada

Help us?

ನ್ಯಾಯ 1:11-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.
12 ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.
13 ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
14 ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
15 ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.
16 ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
17 ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.
18 ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.
ನ್ಯಾಯ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019