Text copied!
Bibles in Kannada

ನ್ಯಾಯ 1:15-20 in Kannada

Help us?

ನ್ಯಾಯ 1:15-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.
16 ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
17 ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.
18 ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.
19 ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.
20 ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
ನ್ಯಾಯ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019