Text copied!
Bibles in Kannada

ನ್ಯಾಯ 1:21-29 in Kannada

Help us?

ನ್ಯಾಯ 1:21-29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.
22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.
23 ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.
24 ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.
25 ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.
26 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.
27 ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.
28 ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.
29 ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು.
ನ್ಯಾಯ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019