Text copied!
Bibles in Kannada

ನ್ಯಾಯ 20:14-25 in Kannada

Help us?

ನ್ಯಾಯ 20:14-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು.
15 ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.
16 ಈ ಎಲ್ಲಾ ಜನರಲ್ಲಿ ಏಳುನೂರು ಜನರು ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬರು ಕೂದಲೆಳೆಯಷ್ಟು ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣರಾಗಿದ್ದರು.
17 ಬೆನ್ಯಾಮೀನ್ಯರಲ್ಲದ ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು; ಇವರೆಲ್ಲರೂ ವೀರರಾಗಿದ್ದರು.
18 ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.
19 ಇಸ್ರಾಯೇಲ್ಯರು ಬೆಳಗ್ಗೆ ಹೊರಟುಹೋಗಿ ಗಿಬೆಯದ ಎದುರಿನಲ್ಲಿ ಪಾಳೆಯಮಾಡಿಕೊಂಡು,
20 ಬೆನ್ಯಾಮೀನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ಸಿದ್ಧರಾಗಿ, ಗಿಬೆಯದ ಎದುರಿನಲ್ಲಿ ವ್ಯೂಹಕಟ್ಟಿ ನಿಂತರು.
21 ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.
22 ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹಕಟ್ಟಿದ ಸ್ಥಳದಲ್ಲೇ ತಿರುಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.
23 ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.
24 ಆದ್ದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.
25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು.
ನ್ಯಾಯ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019