Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 20

ನ್ಯಾಯ 20:3-9

Help us?
Click on verse(s) to share them!
3ಇಸ್ರಾಯೇಲರು ಕೂಡಿಕೊಂಡು ಮಿಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, “ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ” ಎಂದು ಕೇಳಲು
4ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು.
5ಆ ಊರಿನ ಜನರು ನನ್ನನ್ನು ಕೊಲ್ಲಬೇಕೆಂದು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡರು, ಮತ್ತು ನನ್ನ ಉಪಪತ್ನಿಯನ್ನು ಭಂಗಪಡಿಸಿದರು, ಆಕೆಯು ಸತ್ತುಹೋದಳು.
6ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.
7ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು.
8ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ.
9ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.

Read ನ್ಯಾಯ 20ನ್ಯಾಯ 20
Compare ನ್ಯಾಯ 20:3-9ನ್ಯಾಯ 20:3-9