Text copied!
Bibles in Kannada

ನ್ಯಾಯ 20:7-18 in Kannada

Help us?

ನ್ಯಾಯ 20:7-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು.
8 ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ.
9 ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.
10 ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲರಲ್ಲಿ ನಡೆಸಿದ ದುಷ್ಟ ಕಾರ್ಯಕ್ಕಾಗಿ ಅವರಿಗೆ ದಂಡನೆಮಾಡೋಣ” ಅಂದುಕೊಂಡರು.
11 ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.
12 ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?
13 ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.
14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು.
15 ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.
16 ಈ ಎಲ್ಲಾ ಜನರಲ್ಲಿ ಏಳುನೂರು ಜನರು ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬರು ಕೂದಲೆಳೆಯಷ್ಟು ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣರಾಗಿದ್ದರು.
17 ಬೆನ್ಯಾಮೀನ್ಯರಲ್ಲದ ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು; ಇವರೆಲ್ಲರೂ ವೀರರಾಗಿದ್ದರು.
18 ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.
ನ್ಯಾಯ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019