Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 3

ನ್ಯಾಯ 3:20-28

Help us?
Click on verse(s) to share them!
20ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
21ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.
22ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
23ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
24ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
25ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
26ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
27ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.
28ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.

Read ನ್ಯಾಯ 3ನ್ಯಾಯ 3
Compare ನ್ಯಾಯ 3:20-28ನ್ಯಾಯ 3:20-28