Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 4

ನ್ಯಾಯ 4:1-12

Help us?
Click on verse(s) to share them!
1ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.
2ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.
3ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.
4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.
5ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.
6ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
7ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.
8ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ” ಅನ್ನಲು
9ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.
10ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.
11(ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.
12ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ

Read ನ್ಯಾಯ 4ನ್ಯಾಯ 4
Compare ನ್ಯಾಯ 4:1-12ನ್ಯಾಯ 4:1-12