Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 5

ನ್ಯಾಯ 5:17-23

Help us?
Click on verse(s) to share them!
17ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.
18ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.
19“ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
20ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.
21ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.
22ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.
23ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’

Read ನ್ಯಾಯ 5ನ್ಯಾಯ 5
Compare ನ್ಯಾಯ 5:17-23ನ್ಯಾಯ 5:17-23