Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 6

ನ್ಯಾಯ 6:12-14

Help us?
Click on verse(s) to share them!
12ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.
13ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.
14ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.

Read ನ್ಯಾಯ 6ನ್ಯಾಯ 6
Compare ನ್ಯಾಯ 6:12-14ನ್ಯಾಯ 6:12-14