Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 6

ನ್ಯಾಯ 6:17-22

Help us?
Click on verse(s) to share them!
17ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.
18ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು.
19ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.
20ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.
21ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.
22ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.

Read ನ್ಯಾಯ 6ನ್ಯಾಯ 6
Compare ನ್ಯಾಯ 6:17-22ನ್ಯಾಯ 6:17-22