Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ನ್ಯಾಯ - ನ್ಯಾಯ 8

ನ್ಯಾಯ 8:3-14

Help us?
Click on verse(s) to share them!
3ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.
4ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.
5ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.
6ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.
7ಆಗ ಗಿದ್ಯೋನನು ಅವರಿಗೆ, “ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು” ಎಂದು ಹೇಳಿದನು.
8ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.
9ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು” ಅಂದನು.
10ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.
11ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.
12ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.
13ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು,
14ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.

Read ನ್ಯಾಯ 8ನ್ಯಾಯ 8
Compare ನ್ಯಾಯ 8:3-14ನ್ಯಾಯ 8:3-14