13ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.
14ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
15ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.
16ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!
17ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!
18ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.