Text copied!
Bibles in Kannada

ಪ್ರಸ 10:7-17 in Kannada

Help us?

ಪ್ರಸ 10:7-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.
8 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.
9 ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.
10 ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
11 ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.
12 ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.
13 ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.
14 ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
15 ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.
16 ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!
17 ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!
ಪ್ರಸ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019