1ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.
2ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.
3ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.
4ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ.