1ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
2ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
3ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
4ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
5ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
6ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,