Text copied!
Bibles in Kannada

ಪ್ರಸ 12:4-11 in Kannada

Help us?

ಪ್ರಸ 12:4-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
5 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
6 ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
8 “ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
9 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
10 ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
ಪ್ರಸ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019