7ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
8“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
9ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
10ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
11ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.